ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ


ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಅವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಅಭಿಮನ್ಯು ನಾಯಕನಾಗಿ ನಟಿಸಿರುವ ವಿಭಿನ್ನ ಕಥೆ ಹೊಂದಿರುವ ನೂತನ ಚಿತ್ರದ ಶೀರ್ಷಿಕೆ ಇತ್ತೀಚೆಗೆ ಅನಾವರಣಗೊಂಡಿದೆ. ಚಿತ್ರಕ್ಕೆ "ಹಚ್ಚೆ" ಎಂದು ಹೆಸರಿಡಲಾಗಿದೆ. ಅಭಿಮನ್ಯು ಅವರಿಗೆ ನಾಯಕಿಯಾಗಿ ಅದ್ಯಾ ಪ್ರಿಯಾ ನಟಿಸಿದ್ದಾರೆ. ಅನುಪ್ರೇಮ, ಗುರುರಾಜ್ ಹೊಸಕೋಟೆ, ದುಷ್ಯಂತ್, ಶ್ರೀಮಂತ್ ಸುರೇಶ್, ಚಂದ್ರು ಬಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.
"ಹಚ್ಚೆ" ಚಿತ್ರಕ್ಕೆ ಇತಿಹಾಸದ ಶಕ್ತಿ ಎಂಬ ಅಡಿಬರಹವಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕರ್ನಾಟಕದ ಸುಂದರ ಸ್ಥಳಗಳಲ್ಲಿ 50 ದಿನಗಳ ಚಿತ್ರೀಕರಣ ನಡೆದಿದೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಯಾಸಿನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ಆರಂಭಿಸಲಿದೆ.
Related posts
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
