ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಬಳ್ಳಾರಿ ಜೈಲಿನಿಂದ ಬಿಡುಗಡೆ, ಮೈಸೂರಿಗೆ ಪ್ರಯಾಣ


ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಬಳ್ಳಾರಿ ಜೈಲಿನಿಂದ ಬಿಡುಗಡೆ, ಮೈಸೂರಿಗೆ ಪ್ರಯಾಣ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ 17 ಮಂದಿ ಆರೋಪಿಗಳಲ್ಲಿ 5 ಮಂದಿಗೆ ಈಗಾಗಲೇ ಜಾಮೀನು ಸಿಕ್ಕಿದ್ದು, ಇದೀಗ ದರ್ಶನ್ ಆರೋಗ್ಯದ ಕಾರಣದಿಂದ 6 ವಾರಗಳ ಮಧ್ಯಂತರ ಜಾಮೀನು ಪಡೆದಿದ್ದಾರೆ. ಹಿರಿಯ ವಕೀಲ ಸಿ.ವಿ. ನಾಗೇಶ್ ಅವರ ಪರವಾಗಿ ವಾದ ಮಂಡಿಸಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಆದೇಶವನ್ನು ಬಳ್ಳಾರಿ ಜೈಲಿಗೆ ತಲುಪಿದ ನಂತರ, ದರ್ಶನ್ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಬಳ್ಳಾರಿಯಿಂದ ಮೈಸೂರಿಗೆ ರಸ್ತೆ ಮೂಲಕ ತೆರಳಲು ದರ್ಶನ್ ಆಪ್ತರು ನಿರ್ಧರಿಸಿದ್ದು, ಮೈಸೂರಿನಲ್ಲಿರುವ ತಮ್ಮ ತಾಯಿ ಮನೆಗೆ ಹಾಗೂ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ.
ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಈ ಹಿಂದೆ ಕೂಡ ದರ್ಶನ್ ಇಲ್ಲಿ ಚಿಕಿತ್ಸೆ ಪಡೆದಿದ್ದರು. ಅಭಿಮಾನಿಗಳು "ಬಾಸ್ ಇಸ್ ಬ್ಯಾಕ್" ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.