ಮತ್ತೆ ಬಳ್ಳಾರಿ ಜೈಲಿಗೆ ದರ್ಶನ್? ಅಧಿಕಾರಿಗಳ ತೀವ್ರ ಸಿದ್ಧತೆ!


ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದಾದ ಬಳಿಕ, ಅವರು ಇಂದು (ಆಗಸ್ಟ್ 14) ಸಂಜೆ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ. ಶರಣಾದಲ್ಲಿ, ಮತ್ತೊಮ್ಮೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಅವರನ್ನು ವರ್ಗಾಯಿಸುವ ಸಾಧ್ಯತೆ ಹೆಚ್ಚಾಗಿದೆ.
ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರು 63 ದಿನಗಳ ಕಾಲ ಕಳೆದಿದ್ದು, ಅಕ್ಟೋಬರ್ 30ರಂದು ಬಿಡುಗಡೆಗೊಂಡಿದ್ದರು. ಜೈಲು ಅವಧಿಯಲ್ಲಿ ದರ್ಶನ್ ತೀವ್ರ ಬೆನ್ನುನೋವಿನಿಂದ ಬಳಲಿದ್ದು, ವಿಮ್ಸ್ ಆಸ್ಪತ್ರೆಯಲ್ಲಿ ಸ್ಕ್ಯಾನ್ ಮಾಡಲಾಗಿತ್ತು. ತುರ್ತು ಶಸ್ತ್ರಚಿಕಿತ್ಸೆ ಸಲಹೆ ನೀಡಿದ್ದರೂ, ಜಾಮೀನು ಪಡೆದ ಬಳಿಕ ಅವರು ಶಸ್ತ್ರಚಿಕಿತ್ಸೆ ಮಾಡಿಸಿರಲಿಲ್ಲ.
ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಯಾವುದೇ ವಿಶೇಷ ಸೌಲಭ್ಯ ನೀಡಲಾಗಿರಲಿಲ್ಲ; ಸಾಮಾನ್ಯ ಕೈದಿಯಂತೆ ವರ್ತಿಸಲಾಗಿತ್ತು. ಇದೀಗ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಮತ್ತೇ ಬಳ್ಳಾರಿ ಜೈಲಿಗೆ ಅವರನ್ನು ಕರೆತರಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.