ಬಿಗ್ಬಾಸ್ ನಿಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ ವೀಕ್ಷಕ, ನೊಟೀಸ್ ನೀಡಿದ ನ್ಯಾಯಾಲಯ


ಬಿಗ್ಬಾಸ್ ನಿಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ ವೀಕ್ಷಕ, ನೊಟೀಸ್ ನೀಡಿದ ನ್ಯಾಯಾಲಯ ಬಿಗ್ ಬಾಸ್ ಕನ್ನಡ ಸೀಸನ್ 11 ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ ಕಾರ್ಯಕ್ರಮವನ್ನು ನಿಲ್ಲಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಕೀಲ ಕೆ.ಎಲ್. ಭೋಜರಾಜ್, ಬಿಗ್ ಬಾಸ್ ಶೋ ವಿರುದ್ಧ ಅರ್ಜಿ ಹಾಕಿದ್ದಾರೆ.
ಅವರು ಸಲ್ಲಿಸಿದ ಅರ್ಜಿಯಲ್ಲಿ, ಕಾರ್ಯಕ್ರಮದಲ್ಲಿ ಮಹಿಳಾ ಖಾಸಗಿತನಕ್ಕೆ ಧಕ್ಕೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಈ ಕುರಿತಂತೆ ನ್ಯಾಯಾಲಯವು ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರಿಗೆ ನೊಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆ ಅಕ್ಟೋಬರ್ 28ರಂದು ನಡೆಯಲಿದೆ.
ಈ ಬೆಳವಣಿಗೆಯಿಂದ ಬಿಗ್ ಬಾಸ್ 11 ನೇ ಸೀಸನ್ ಅನ್ನು ಮುಂದುವರಿಸುವ ವಿಚಾರದಲ್ಲಿ ಅನುಮಾನ ಎದುರಾಗಿದೆ.
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ – ಚಾಪ್ಟರ್ 1 ಟ್ರೇಲರ್ ನೋಡಲು ಅಭಿಮಾನಿಗಳ ಕಾತರ!
