ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ! ಅವನಿಗೆ ಏನಾಯಿತು?


ಝೀ ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುಃಖದ ಸುದ್ದಿ ಹೊರಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮದ ಸಿದ್ದಿ ಜನಾಂಗದ ಈ ಯುವಕ, ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಅತ್ಯುತ್ತಮ ಕಲಾವಿದರಾಗಿದ್ದರು.
ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಿತರಾದ ಅವರು, ನಂತರ ಧಾರವಾಹಿಗಳಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಸಾಕಷ್ಟು ಅವಕಾಶಗಳಿಲ್ಲದೆ ಕೂಲಿ ಕೆಲಸ ಮಾಡುತ್ತಿದ್ದುದು ಖಿನ್ನತೆಗೆ ಕಾರಣವಾಯಿತೆಂದು ತಿಳಿದು ಬಂದಿದೆ.
ಚಿಮನಳ್ಳಿಯ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಈ ಘಟನೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಾರಂಗ ಕಳೆದುಕೊಂಡ ಈ ಪ್ರತಿಭಾನ್ವಿತ ಕಲಾವಿದರ ನಷ್ಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತವಾಗಿದೆ.
Related posts
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
