Back to Top

ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ "ತಪಸ್ಸಿ"

SSTV Profile Logo SStv July 1, 2025
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ "ತಪಸ್ಸಿ"
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ "ತಪಸ್ಸಿ"

ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷಪಾತ್ರದಲ್ಲಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ತಪಸ್ಸಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

"ತಪಸ್ಸಿ" ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಮೆಯ್ರಾ ಗೋಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ. ಭಾಸ್ಕರ್, ಅನುಶಾ ಕಿಣಿ, ರಥರ್ವ, ಸಚ್ಚಿನ್, ಗುಬ್ಬಿ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.  ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಅವರೆ ಛಾಯಾಗ್ರಹಣ ಹಾಗೂ ಕಲಾ ನಿರ್ದೇಶನವನ್ನೂ ಮಾಡಿರುವ ಬಹು ನಿರೀಕ್ಷಿತ "ತಪಸ್ಸಿ" ಚಿತ್ರಕ್ಕೆ ಅರುಣ್ ಪಿ ಥಾಮಸ್ ಸಂಕಲನವಿದೆ. ಆರವ್ ರಾಶಿಕ್ ಅವರ ಹಿನ್ನೆಲೆ ಸಂಗೀತ ನೀಡಿದ್ದಾರೆ.