Back to Top

ಸೋಶಿಯಲ್ ಮೀಡಿಯಾದ ವಿವಾದ: ದರ್ಶನ್ ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಸಲಹೆ

SSTV Profile Logo SStv August 2, 2025
ದರ್ಶನ್ ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಸಲಹೆ
ದರ್ಶನ್ ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಸಲಹೆ

ನಟಿ ರಮ್ಯಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿರುವ ಪ್ರಕರಣಕ್ಕೆ ಸಂಬಂಧಿಸಿ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ 30ಕ್ಕೂ ಹೆಚ್ಚು ಇನ್‌ಸ್ಟಾಗ್ರಾಂ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಾಗಿ ತನಿಖೆ ನಡೆದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, "ಹೆಣ್ಣು ಮಕ್ಕಳಿಗೆ ಕೆಟ್ಟ ರೀತಿಯ ಕಾಮೆಂಟ್ ಮಾಡುವುದು ಸರಿಯಲ್ಲ. ಪೊಲೀಸರು ತನಿಖೆ ಮಾಡಿ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ನಾನು ಆಶಿಸುತ್ತೇನೆ," ಎಂದರು.

ಅಲ್ಲದೆ, "ಇದನ್ನು ದರ್ಶನ್ ಅಭಿಮಾನಿಗಳು ಮಾಡಿದ್ದಾರೆ ಎಂಬುದಕ್ಕೆ ಸತ್ಯಾಂಶವಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೂ, ಅಭಿಮಾನಿಗಳೇ ಈ ರೀತಿ ಮಾಡಿದ್ದರೆ, ದಯವಿಟ್ಟು ನಿಮ್ಮ ಭವಿಷ್ಯದ ಬಗ್ಗೆ ಗಮನ ಹರಿಸಿ. ಇಂತಹ ಪೋಸ್ಟ್‌ಗಳಿಂದ ನಿಮ್ಮ ಜೀವನ ಹಾಳು ಮಾಡಿಕೊಳ್ಳಬೇಡಿ," ಎಂಬ ಸಂದೇಶವನ್ನು ಅವರು ನೀಡಿದ್ದಾರೆ.