ರಾಜ್ಯವನ್ನೇ ಬೆಚ್ಚಿ ಬೀಳಿಸುವಾ ಸುದ್ಧಿ: ದರ್ಶನ್, ಪವಿತ್ರಾ ಗೌಡ ಸೇರಿ 7 ಜನರ ಜಾಮೀನು ರದ್ದು


ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ದೊಡ್ಡ ಆಘಾತ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ನ್ಯಾ. ಜೆ. ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠವು ತಾಂತ್ರಿಕ ಕಾರಣಗಳಿಂದ ಹೈಕೋರ್ಟ್ ನೀಡಿದ ಜಾಮೀನು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾಗಿದ್ದು, ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರು. ಬೆನ್ನು ನೋವಿನ ಕಾರಣ ನೀಡಿ ತಾತ್ಕಾಲಿಕವಾಗಿ ಹೊರಬಂದ ಅವರು, ಡಿಸೆಂಬರ್‌ನಲ್ಲಿ ಪೂರ್ಣ ಜಾಮೀನು ಪಡೆದಿದ್ದರು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.
ಸುಪ್ರೀಂ ತೀರ್ಪಿನಿಂದ ದರ್ಶನ್ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ನಿರ್ಧಾರವು ಅವರ ವೃತ್ತಿ ಜೀವನಕ್ಕೂ ದೊಡ್ಡ ಹೊಡೆತ ನೀಡಲಿದೆ.