ವಿಷ್ಣು ಸಮಾಧಿ ತೆರವು – ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಾಣಕ್ಕೆ ಅಭಿಮಾನಿಗಳ ಒತ್ತಾಯ


ಕನ್ನಡ ಚಿತ್ರರಂಗದ ಧೀಮಂತ ನಾಯಕ ಡಾ. ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ ಘಟನೆ ರಾಜ್ಯದಾದ್ಯಂತ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ನಿನ್ನೆ ವಿಷ್ಣು ಅಭಿಮಾನಿಗಳ ಸಂಘ ಫಿಲ್ಮ್ ಚೇಂಬರ್‌ಗೆ ಮನವಿ ಸಲ್ಲಿಸಿ, ದಾದಾ ಅಂತ್ಯಕ್ರಿಯೆ ನಡೆದ ಜಾಗದಲ್ಲೇ ಸ್ಮಾರಕ ಪುನರ್‌ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಮನವಿಯನ್ನು ಸ್ವೀಕರಿಸಿದ ಫಿಲ್ಮ್ ಚೇಂಬರ್, ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದೆ. ಮೈಸೂರಿನಲ್ಲಿ ಈಗಾಗಲೇ ಸ್ಮಾರಕ ನಿರ್ಮಾಣವಾದರೂ, ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿನ ಜಾಗವನ್ನು ಉಳಿಸಿಕೊಳ್ಳಲು ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಅಭಿಮಾನಿಗಳು, ಸಮಾಧಿ ತೆರವುಗೊಳಿಸಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರ ಶೀಘ್ರದಲ್ಲೇ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಚಾರಕ್ಕೆ ಅಂತ್ಯ ಸಿಗುತ್ತದೆಯೇ ಎಂಬುದು ಕಾದು ನೋಡಬೇಕು.