ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫ್ಲೈರ್ ಫ್ಲೈ’ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಚಿತ್ರ ‘ಫ್ಲೈರ್ ಫ್ಲೈ’ ಪ್ರಾರಂಭಿಕ ಹಂತವನ್ನು ಮುಗಿಸಿ, ಕುಂಬಳಕಾಯಿ ಸಮಾರಂಭವನ್ನು ಸಂಭ್ರಮದಿಂದ ಆಚರಿಸಿತು. ಈ ಸಮಾರಂಭದಲ್ಲಿ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಿರ್ದೇಶಕ-ನಟ ವಂಶಿ, ಸಂಗೀತ ನಿರ್ದೇಶಕ ಚರಣ್ ರಾಜ್, ನಾಯಕಿ ರಚನಾ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು.
ಈ ಚಿತ್ರದಲ್ಲಿ ವಂಶಿ ನಾಯಕನಾಗಿ ಮತ್ತು ನಿರ್ದೇಶಕರಾಗಿ ದುಡಿದಿದ್ದು, ರಚನಾ ಇಂದರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಸುಧಾರಾಣಿ, ಅಚ್ಯುತ್ ಕುಮಾರ್, ಶೀತಲ್ ಶೆಟ್ಟಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಕ್ಯಾಮೆರಾ ವರ್ಕ್, ಚರಣ್ ರಾಜ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ. ‘ಫ್ಲೈರ್ ಫ್ಲೈ’ ಚಿತ್ರವು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆಯ ಆಶ್ರಯದಲ್ಲಿ ಯುವ ಪ್ರತಿಭೆಗಳಿಗೆ ಬೆಂಬಲ ನೀಡುವ ಗುರಿಯಲ್ಲಿದೆ.