Back to Top

ಜನಮನಸೂರೆಗೊಳ್ಳುತ್ತಿದೆ "ಜಸ್ಟ್ ಮ್ಯಾರೀಡ್" ಚಿತ್ರದ "ಮಾಂಗಲ್ಯಂ ತಂತು ನಾನೇನಾ" ಹಾಡು

SSTV Profile Logo SStv July 16, 2025
"ಜಸ್ಟ್ ಮ್ಯಾರೀಡ್" ಚಿತ್ರದ "ಮಾಂಗಲ್ಯಂ ತಂತು ನಾನೇನಾ" ಹಾಡು
"ಜಸ್ಟ್ ಮ್ಯಾರೀಡ್" ಚಿತ್ರದ "ಮಾಂಗಲ್ಯಂ ತಂತು ನಾನೇನಾ" ಹಾಡು

ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಾಣ ಮಾಡಿರುವ " ಜಸ್ಟ್ ಮ್ಯಾರೀಡ್" ಚಿತ್ರಕ್ಕಾಗಿ ಹೆಸರಾಂತ ಸಾಹಿತಿ ಡಾ|ವಿ..ನಾಗೇಂದ್ರಪ್ರಸಾದ್ ಬರೆದಿರುವ "ಮಾಂಗಲ್ಯಂ ತಂತು ನಾನೇನಾ" ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಅಜನೀಶ್ ಲೋಕನಾಥ್ ಅವರೆ ಸಂಗೀತ ನೀಡಿರುವ ಈ ಹಾಡನ್ನು ಸಂಜಿತ್ ಹಗ್ಡೆ, ಐಶ್ವರ್ಯ ರಂಗರಾಜನ್ ಹಾಗೂ ವರುಣ್ ರಾಮಚಂದ್ರನ್ ಅಮೋಘವಾಗಿ ಹಾಡಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ ಈ ಪ್ರೇಮ ಕಥಾನಕ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಿ.ಆರ್.ಬಾಬಿ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ನಾಯಕ ಹಾಗೂ ನಾಯಕಿಯಾಗಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ಅಭಿನಯಿಸಿದ್ದಾರೆ. ಹಿರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ,  ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದವರು  ಅಭಿನಯಿಸಿದ್ದಾರೆ.

ಸಿ.ಆರ್ ಬಾಬಿ ಅವರೆ ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಅವರ‌ ಸಂಭಾಷಣೆ, ಪಿ ಜಿ  ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ "ಜಸ್ಟ್ ಮ್ಯಾರೀಡ್" ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್,  ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.