ನಟ ಪ್ರಥಮ್‌ಗೆ ಮಾರಕಾಸ್ತ್ರಗಳಿಂದ ಬೆದರಿಕೆ! ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR


ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜುಲೈ 22ರಂದು ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಬಳಿ ಇರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಾಲಯಕ್ಕೆ ಪೂಜೆಗೆ ಹೋಗಿದ್ದ ಸಂದರ್ಭ ಈ ಘಟನೆ ನಡೆದಿದೆ.
ಪ್ರಥಮ್ ದೂರಿನಲ್ಲಿ ಹೆಸರಿಸಲಾಗಿರುವವರಲ್ಲಿ ಬೇಕರಿ ರಘು (ಎ1) ಮತ್ತು ಯಶಸ್ವಿನಿ (ಎ2) ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಚಾಕು, ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪಗಳಿವೆ. ಘಟನೆಯ ಕುರಿತು ಪ್ರಥಮ್ ಸ್ವತಃ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಅವರಿಗೆ ದೂರು ನೀಡಿದ್ದರು.
ಇದೇ ಪ್ರಕರಣದಲ್ಲಿ ಪ್ರಥಮ್ ತಮ್ಮ ದೂರುದಲ್ಲಿ, ಕೆಲವು ದರ್ಶನ್ ಅಭಿಮಾನಿ ಪೇಜ್‌ಗಳು – D Dynasty, D Kingdom, D Universe ಸೇರಿ 500ಕ್ಕೂ ಹೆಚ್ಚು ಪೇಜ್‌ಗಳು ತಮ್ಮ ತೇಜೋವಧೆಗೆ ಇಳಿದಿವೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕೂಡ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 126(2), 3(5), 351(3), 352 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Related posts
Trending News
ಹೆಚ್ಚು ನೋಡಿ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
