Back to Top

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಪಡೆದ ಡಾ. ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ "ನಿಂಬಿಯಾ ಬನಾದ ಮ್ಯಾಗ ಪೇಜ್ ೧"

SSTV Profile Logo SStv August 21, 2025
"ನಿಂಬಿಯಾ ಬನಾದ ಮ್ಯಾಗ ಪೇಜ್ ೧"ಗೆ ಅತ್ಯುತ್ತಮ ಚಿತ್ರದ ಗೌರವ
"ನಿಂಬಿಯಾ ಬನಾದ ಮ್ಯಾಗ ಪೇಜ್ ೧"ಗೆ ಅತ್ಯುತ್ತಮ ಚಿತ್ರದ ಗೌರವ

ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶನದಲ್ಲಿ ಡಾ||ರಾಜಕುಮಾರ್ ಅವರ ಮೊಮ್ಮಗ ಷಣ್ಮುಖ ಗೋವಿಂದರಾಜ್ ನಾಯಕರಾಗಿ ನಟಿಸಿರುವ "ನಿಂಬಿಯಾ ಬನಾದ ಮ್ಯಾಗ ಪೇಜ್ ೧" ಚಿತ್ರ ಕೆಲವು ತಿಂಗಳ ಹಿಂದೆ ತೆರೆಕಂಡು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ವಿಭಿನ್ನ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರ ದೇಶ ಹಾಗೂ ವಿದೇಶಗಳ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

"DHANBAD" international film festival ನಲ್ಲಿ ಅತ್ಯುತ್ತಮ ಚಿತ್ರ, 7th sisters North, east international film festival ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ, ಬಾಂಗ್ಲಾದೇಶದ "7th crown international film festival" ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ,‌  ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಹಾಗೂ ಅತ್ಯುತ್ತಮ ಪೋಷಕ ಕಲಾವಿದ ಪ್ರಶಸ್ತಿ ಮತ್ತು ಥೈಲ್ಯಾಂಡ್ ಇಂಟರ್ ನ್ಯಾಷನಲ್ ಫೆಸ್ಟಿವಲ್ ನಲ್ಲಿ ಸಹ ಪ್ರಶಸ್ತಿ ಪಡೆದುಕೊಂಡಿದೆ. ಸಿದ್ದು ಕಾಂಚನಹಳ್ಳಿ ಈ ಚಿತ್ರದ ಛಾಯಾಗ್ರಹಕರು.