ಅತ್ಯಾಚಾರ ಪ್ರಕರಣದ ಆರೋಪಿ ನಟನ ಸಿನಿಮಾ ಅಮೆಜಾನ್ ಪ್ರೈಮ್‌ನಲ್ಲಿ ವೈರಲ್?


‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ ಇದೀಗ OTT ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್ನಲ್ಲಿ ಲಭ್ಯವಾಗಿದೆ. ಕೆ. ರಾಮ್ ನಾರಾಯಣ್ ನಿರ್ದೇಶನದ ಈ ಸಿನಿಮಾ, ಮೂಲತಃ ಚಿತ್ರಮಂದಿರಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ಇದೀಗ ಹೊಸ ರೂಪದಲ್ಲಿ ಪ್ರೇಕ್ಷಕರಿಗೆ ಒದಗಿದೆ.
ಮೌನಾ ಗುಡ್ಡೆಮನೆ ನಾಯಕಿಯಾಗಿ ನಟಿಸಿದ್ದು, ಚಿತ್ರದಲ್ಲಿ ರಂಗಾಯಣ ರಘು, ಶರತ್ ಲೋಹಿತಾಶ್ವ, ತಬಲ ನಾಣಿ, ಹರೀಶ್ ರಾಜ್ ಮುಂತಾದ ಪ್ರಮುಖ ನಟರು ಇದ್ದಾರೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ರಾಮ್ ನಾರಾಯಣ್ ಅವರ ಗೀತಗಳು ಹಾಗೂ ಮನೋಮೂರ್ತಿ ಸಂಗೀತ ಚಿತ್ರಕ್ಕೆ ಬಲ ನೀಡಿದ್ದಾರೆ.
ಡಾ. ರಾಜ್‌ಕುಮಾರ್ ಅಭಿನಯದ 'ಸತ್ಯ ಹರಿಶ್ಚಂದ್ರ' ಚಿತ್ರದ ಪ್ರಸಿದ್ಧ ಹಾಡಿನ ಸಾಲನ್ನು ಶೀರ್ಷಿಕೆಯಾಗಿಸಿಕೊಂಡ ಈ ಚಿತ್ರ, ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ಗಂಭೀರ ಸಾಮಾಜಿಕ ಸಮಸ್ಯೆಗಳನ್ನು ಎತ್ತಿ ಹಿಡಿದಿದೆ.
ವಿವಾದದ ನಡುವೆಯೇ ರಿಲೀಸ್ ಆಗಿದ್ದ ಈ ಸಿನಿಮಾ ಇದೀಗ ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ OTTನಲ್ಲಿ ಸ್ಟ್ರೀಮಿಂಗ್ ಆಗುತ್ತಿದ್ದು, ಮನೆಯಲ್ಲಿಯೇ ನೋಡಬಹುದಾದ ಇನ್ನೊಂದು ಆಯ್ಕೆ ಆಗಿದೆ.
Related posts
Trending News
ಹೆಚ್ಚು ನೋಡಿ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
