Back to Top

ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ

SSTV Profile Logo SStv December 17, 2024
ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ ಬೆಂಗಳೂರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಮತ್ತು 14ನೇ ಆರೋಪಿ ಪ್ರದೂಷ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ಎಸ್‌. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಕಳೆದ ಶುಕ್ರವಾರ ಜಾಮೀನು ನೀಡಿದ್ದು, ಪ್ರಕ್ರಿಯೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿಸೆಂಬರ್ 17ರಂದು ಅವರ ಬಿಡುಗಡೆ ನಡೆದಿದೆ. ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತೆ ಸೇರಿ ಹಲವು ಷರತ್ತುಗಳನ್ನು ನಿಬಂಧನೆಗಾಗಿ ಕೋರ್ಟ್ ವಿಧಿಸಿದೆ. ಪ್ರಾಸಿಕ್ಯೂಷನ್ ಯಾಕೆ ಬಂಧಿಸಲಾಗಿದೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡದಿದ್ದ ಹಿನ್ನೆಲೆ, ಕಾನೂನಿನ ಲೋಪದ ಆಧಾರದ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ನ್ಯಾಯಪೀಠ 68 ಪುಟಗಳ ತೀರ್ಪಿನಲ್ಲಿ ತಿಳಿಸಿದೆ.