ಪವಿತ್ರಾ ಗೌಡ ಮೇಲೆ ACP ಭರತ್ ರೆಡ್ಡಿ ನಿಗಾ – ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ!


ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನುಗಳನ್ನು ಸುಪ್ರೀಂ ಕೋರ್ಟ್ ಇಂದು ರದ್ದುಪಡಿಸಿದೆ. ಇದರ ಬೆನ್ನಲ್ಲೇ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.
ಎಸಿಪಿ ಭರತ್ ರೆಡ್ಡಿ ನೇತೃತ್ವದ ತಂಡ ಪವಿತ್ರಾ ಗೌಡ ಮೇಲೆ ನಿಗಾ ಇಟ್ಟುಕೊಂಡಿದ್ದು, ಯಾವುದೇ ರೀತಿಯಿಂದಲೂ ತಪ್ಪಿಸಿಕೊಳ್ಳದಂತೆ ಕ್ರಮ ಕೈಗೊಂಡಿದೆ. ಕೆಲವೇ ಕ್ಷಣಗಳಲ್ಲಿ ಅವರನ್ನು ವಶಕ್ಕೆ ಪಡೆದು ಮೆಡಿಕಲ್ ಪರೀಕ್ಷೆಗೆ ಒಳಪಡಿಸಿ, ಸ್ಥಳೀಯ ಠಾಣೆಗೆ ಕರೆದೊಯ್ಯಲಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಯುತ್ತಿದೆ.
ಸದ್ಯ ಪವಿತ್ರಾ ಗೌಡ ಅವರು ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಆರ್.ಆರ್. ನಗರದಲ್ಲಿರುವ ಮನೆಗೆ ಮರಳಿದ್ದಾರೆ. ಸುಪ್ರೀಂ ತೀರ್ಪಿನ ನಂತರ ಪೊಲೀಸರು ಅವರ ನಿವಾಸದ ಬಳಿ ತಂಗಿದ್ದು, ಶೀಘ್ರದಲ್ಲೇ ಬಂಧನ ಸಾಧ್ಯತೆಯಿದೆ.
ಈ ಪ್ರಕರಣದಲ್ಲಿ ಮೊದಲು ಹೈಕೋರ್ಟ್ ಜಾಮೀನು ನೀಡಿದ್ದರೂ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಆ ನಿರ್ಧಾರವನ್ನು ಪ್ರಶ್ನಿಸಿತ್ತು. ಇಂದು ನ್ಯಾಯಾಲಯವು ಎಲ್ಲ ಆರೋಪಿಗಳ ಜಾಮೀನು ರದ್ದುಪಡಿಸುವ ತೀರ್ಪು ನೀಡಿದೆ.