ಮೋಹಕ ತಾರೆ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ


ಮೋಹಕ ತಾರೆ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ ಮೋಹಕ ತಾರೆ ರಮ್ಯಾ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ರಿಯಲ್ ಸ್ಟಾರ್ ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ರಮ್ಯಾ ಸಜ್ಜಾಗಿದ್ದಾರೆ. MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್. ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯಾ ಮುಖ್ಯಪಾತ್ರದಲ್ಲಿ ನಟಿಸಿರುವ ‘ರಕ್ತ ಕಾಶ್ಮೀರ’ ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ. ಅದರ ನಿರ್ಮೂಲನೆಗೆ ಸಂಬಂಧಿಸಿದ ಕಥಾವಸ್ತುವನ್ನೂ ಈ ಚಿತ್ರ ಹೊಂದಿದೆ.ಎಸ್. ವಿ ರಾಜೇಂದ್ರಸಿಂಗ್ ಬಾಬು ಅವರೆ ‘ರಕ್ತ ಕಾಶ್ಮೀರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ಎಂ.ಎಸ್ ರಮೇಶ್ ಅವರದು. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ, ರಮ್ಯಾ, ದೊಡ್ಡಣ್ಣ, ಓಂಪ್ರಕಾಶ್ ರಾವ್, ತೆಲುಗು ನಟಿ ಅನಿಲ, ಕುರಿ ಪ್ರತಾಪ್ ಮುಂತಾದವರಿದ್ದಾರೆ.
Related posts
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
