‘ಬೆಳವಣಿಗೆಗೂ ಮುನ್ನ ನಾಶವಾಗಬೇಕು’ - ರಮ್ಯಾ ಬೆನ್ನಿಗೆ ನಿಂತ ವಿನಯ್ ರಾಜ್‌ಕುಮಾರ್


ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾ (ದಿವ್ಯ ಸ್ಪಂದನ) ಅವರಿಗೆ ಬರುವ ಅಶ್ಲೀಲ ಸಂದೇಶಗಳ ಹಿನ್ನೆಲೆಯಲ್ಲಿ, ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ನಟಿ ರಮ್ಯಾ, ರೇಣುಕಾಸ್ವಾಮಿ ಪ್ರಕರಣದಲ್ಲಿ ನ್ಯಾಯ ಸಿಗಬೇಕೆಂಬ ಪೋಸ್ಟ್ ಮಾಡಿದ ನಂತರ, ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದುರ್ಬರ ಕಮೆಂಟ್‌ಗಳು ಹರಿದುಬಂದಿವೆ.
ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ಕೂಡ ರಮ್ಯಾಗೆ ಬೆಂಬಲ ನೀಡಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಇದೇ ಸಂದರ್ಭದಲ್ಲಿ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ (FIRE) ಸಂಸ್ಥೆಯೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದು, ಕಠಿಣ ಕ್ರಮಕ್ಕೆ ಒತ್ತಾಯಿಸಿದೆ.
ಇದೀಗ ನಟ ಡಾ. ರಾಜ್‌ಕುಮಾರ್ ಅವರ ಮೊಮ್ಮಗ, ವಿನಯ್ ರಾಜ್‌ಕುಮಾರ್ ಕೂಡ ರಮ್ಯಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. "ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಣುಮಕ್ಕಳನ್ನು ಕೀಳಾಗಿ ಕಾಣುವ ಪ್ರಪಂಚ ಬೆಳವಣಿಗೆಗೂ ಮುನ್ನ ನಾಶವಾಗಬೇಕು" ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಇತ್ತ, ರಮ್ಯಾ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳಲು ಸಜ್ಜಾಗಿದ್ದು, ಈ ವಿಚಾರದಲ್ಲಿ ನಿರ್ಲಕ್ಷ್ಯವಿಲ್ಲ ಎಂಬುದನ್ನು ತೋರಿಸಿದ್ದಾರೆ. ರಮ್ಯಾ ವಿರುದ್ಧದ ಆನ್‌ಲೈನ್ ದುರುಪಯೋಗದ ವಿರುದ್ಧ ಇದೀಗ ಚಿತ್ರರಂಗವೂ ಒಗ್ಗಟ್ಟಾಗಿ ನಿಂತಿರುವುದು ಗಮನಾರ್ಹ.
Related posts
Trending News
ಹೆಚ್ಚು ನೋಡಿ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
