ಬೃಹತ್ ಬಜೆಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ರಾಮಾಯಣ’ ಚಿತ್ರ!


ಭಾರತದ ಚಿತ್ರರಂಗದಲ್ಲಿ ಹೊಸ ದಾಖಲೆ ಸ್ಥಾಪಿಸಲು ಹೊರಟಿರುವ ‘ರಾಮಾಯಣ’ ಸಿನಿಮಾ, ಬಜೆಟ್ ವಿಚಾರದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ಬರೋಬ್ಬರಿ ನಾಲ್ಕು ಸಾವಿರ ಕೋಟಿ ರೂಪಾಯಿ ಬಜೆಟ್ ಹೊಂದಿರುವ ಈ ಚಿತ್ರದಲ್ಲಿ, ಯಶ್ ರಾವಣನಾಗಿ, ರಣಬೀರ್ ಕಪೂರ್ ರಾಮನಾಗಿ, ಹಾಗೂ ಸಾಯಿ ಪಲ್ಲವಿ ಸೀತೆಯಾಗಿ ಅಭಿನಯಿಸುತ್ತಿದ್ದಾರೆ.
ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗಿರುವ ನಮಿತ್ ಮಲ್ಹೋತ್ರಾ ಅವರು ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಎರಡು ಭಾಗಗಳಲ್ಲಿ ತೆರೆಗೆ ಬರಲಿರುವ ಈ ಸಿನಿಮಾ, ಒಟ್ಟು 500 ಮಿಲಿಯನ್ ಡಾಲರ್ (ಅಂದರೆ ಸುಮಾರು 4000 ಕೋಟಿ ರೂ.) ಬಜೆಟ್ ಹೊಂದಿದೆ. ಇದು ವಿಶ್ವದ ಅತಿ ದೊಡ್ಡ ಸಿನಿಮಾ ಆಗಲಿದೆ ಎಂಬ ನಿರೀಕ್ಷೆಯಿದೆ.
ಯಶ್ ಅವರು ತಮಗೆ ಸಂಭಾವನೆ ರೂಪದಲ್ಲಿ ದೊರಕಬೇಕಾಗಿದ್ದ 100 ಕೋಟಿ ರೂಪಾಯಿ ಹಣವನ್ನು ಚಿತ್ರದಲ್ಲೇ ಹೂಡಿಕೆ ಮಾಡಿಕೊಂಡಿದ್ದು, ನಿರ್ಮಾಪಕರಲ್ಲೊಬ್ಬರಾಗಿದ್ದಾರೆ. ಅವರು ಒಟ್ಟು 100-150 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಚಿತ್ರದ ನಿರ್ದೇಶನದ ಹೊಣೆ ನಿತೇಶ್ ತಿವಾರಿ ಹೊತ್ತಿದ್ದಾರೆ. ಪ್ರಸ್ತುತ ಹಾಲಿವುಡ್ ಮಟ್ಟದ ತಾಂತ್ರಿಕತೆ ಹಾಗೂ ವಿಶ್ವಮಟ್ಟದ ಕಥಾಹಂದರದೊಂದಿಗೆ ಈ ಚಿತ್ರಕ್ಕೆ ಭಾರಿ ನಿರೀಕ್ಷೆ ನಿರ್ಮಾಣವಾಗಿದೆ. ರಾಮಾಯಣ ಈ ಬಾರಿಯಲ್ಲೂ ಹೊಸ ಐತಿಹಾಸಿಕ ಬೆಳಕು ನೀಡುವುದರಲ್ಲಿ ಅನುಮಾನವೇ ಇಲ್ಲ!
Related posts
Trending News
ಹೆಚ್ಚು ನೋಡಿ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
