Back to Top

ಗಡಿ ಮೀರಿದ ಪ್ರೇಮಕಥೆ 'ಏಳುಮಲೆ' ಬಿಡುಗಡೆ ದಿನಾಂಕ ನಿಗದಿ

SSTV Profile Logo SStv August 18, 2025
ಸೆಪ್ಟಂಬರ್ 5ರಂದು ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾ ರಿಲೀಸ್
ಸೆಪ್ಟಂಬರ್ 5ರಂದು ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾ ರಿಲೀಸ್

ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳಿರುವ ಏಳುಮಲೆ ಸಿನಿಮಾ ಸೆಪ್ಟೆಂಬರ್ 5ರಂದು  ತೆರೆಗೆ ಬರ್ತಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.  

ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ತಾರಾಬಳಗದಲ್ಲಿದ್ದಾರೆ.

ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.