ಸೆಟ್ಟೇರಿತು ಯುವ ರಾಜ್‌ಕುಮಾರ್ ‘ಎಕ್ಕ’ ಜೂನ್ 6, 2025 ರಲ್ಲಿ ರಿಲೀಸ್ ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ‘ಎಕ್ಕ’ ಸಿನಿಮಾಗೆ ಇಂದು (ನ.28) ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ.ವಿಜಯ್ ಕಿರಗಂದೂರ್ ಅವರ ಪತ್ನಿ ಶ್ರೀಮತಿ ಶೈಲಜಾ ವಿಜಯ್ ಕ್ಲಾಪ್ ಮಾಡುವ ಮೂಲಕ ‘ಎಕ್ಕ’ ಚಿತ್ರಕ್ಕೆ ನಾಂದಿ ಹಾಡಲಾಯಿತು, ಮೊದಲ ಶಾಟ್ ಅನ್ನು ಡಾಲಿ ಧನಂಜಯ್ ನಿರ್ದೇಶಿಸಿದ್ದು, ನಿರ್ಮಾಪಕ ಕಾರ್ತಿಕ ಗೌಡ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮೀ ರಾಮಕೃಷ್ಣ ಕ್ಯಾಮೆರಾ ಬಟನ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು.
ಕಾಶ್ಮೀರ, ಬೆಂಗಳೂರು, ಮೈಸೂರು, ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿದಂತೆ ಹಲವಾರು ಸ್ಥಳಗಳಲ್ಲಿ ‘ಎಕ್ಕ’ ಚಿತ್ರದ ಚಿತ್ರೀಕರಣ ನಡೆಯುವುದಾಗಿ ತಂಡ ಇಂದು ತಿಳಿಸಿದೆ.ಈ ಚಿತ್ರದ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ‘ಎಕ್ಕ’ ಒಂದು ಮೆಗಾ ಚಿತ್ರವಾಗಿದ್ದು, ಇದರ ಜವಾಬ್ದಾರಿ ಹೊತ್ತಿರುವ ಹೆಮ್ಮೆ ನನಗಿದೆ. ನಟ ಯುವ ರಾಜ್ ಕುಮಾರ್ ಮಾತನಾಡಿ, ತಾಯಿ ಆಶಿರ್ವಾದದೊಂದಿಗೆ, ಅಪ್ಪು ಚಿಕ್ಕಪ್ಪನ ಆಶಿರ್ವಾದದೊಂದಿಗೆ ಇವತ್ತು ‘ಎಕ್ಕ’ ಚಿತ್ರವನ್ನು ಆರಂಭಿಸಿದ್ದೇವೆ. ಮೂರು ಹೆಸರಾಂತ ನಿರ್ಮಾಣ ಸಂಸ್ಥೆಗಳೊಡನೆ, ರೋಹಿತ್ ಪದಕಿ ಅಂತಹ ದೊಡ್ಡ ನಿರ್ದೇಶಕರೊಡನೆ ಕೆಲಸ ಮಾಡುತ್ತಿರುವುದು ನನಗೆ ತುಂಬಾ ಖುಷಿ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ಚಿತ್ರದ ನಾಯಕಿ ಸಂಪದಾ ಮಾತನಾಡಿ, ‘ಎಕ್ಕ’ ಚಿತ್ರದ ಆರಂಭ ಬಹಳ ಮಂಗಳಕರವಾಗಿ ನೆರವೇರಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಚಿತ್ರೀಕರಣವನ್ನು ನಾನು ಕಾತುರವಾಗಿ ಎದುರು ನೋಡುತ್ತಿದೇನೆ ಎಂದು ತಿಳಿಸಿದರು. ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್ ಲಾಂಛನದಡಿಯಲ್ಲಿ ಹಾಗು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟುಡಿಯೋಸ್ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. ‘ಎಕ್ಕ’ ಚಿತ್ರವು ಜೂನ್ 6 , 2025 ರಂದು ತೆರೆ ಕಾಣುವುದಾಗಿ ಚಿತ್ರತಂಡ ತಿಳಿಸಿದೆ. ಈ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಲಿದೆ ಎಂಬ ಆಶ್ವಾಸನೆಯನ್ನು ಚಿತ್ರ ತಂಡ ನೀಡಿದೆ.