ಅಜಿತ್ 64ನೇ ಚಿತ್ರ: ಕೆಜಿಎಫ್ ಚೆಲುವೆ ಶ್ರೀನಿಧಿ ಶೆಟ್ಟಿ ಜೋಡಿ, ಪ್ಯಾನ್ ಇಂಡಿಯಾ ಬಿಗ್ ಬಜೆಟ್ ಸಿನಿಮಾ!


ತಮಿಳು ಸೂಪರ್‌ಸ್ಟಾರ್ ಅಜಿತ್ ತಮ್ಮ 64ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರದ ಭರ್ಜರಿ ಯಶಸ್ಸಿನ ನಂತರ, ಅದೇ ನಿರ್ದೇಶಕ ಅಧಿಕ್ ರವಿಚಂದ್ರನ್ ಅವರೊಂದಿಗೆ ಮತ್ತೊಮ್ಮೆ ಅಜಿತ್ ಕೈಜೋಡಿಸುತ್ತಿದ್ದಾರೆ. ಈ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ತಯಾರಿಸಲಾಗುತ್ತಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಆರಂಭವಾಗುವ ನಿರೀಕ್ಷೆಯಿದೆ.
ಈ ಚಿತ್ರದಲ್ಲಿ ಅಜಿತ್ ಅವರಿಗೆ ಜೋಡಿಯಾಗಿ ನಟಿಸಲಿರುವುದು ಕೆಜಿಎಫ್ ಖ್ಯಾತಿಯ ನಟಿ ಶ್ರೀನಿಧಿ ಶೆಟ್ಟಿ. ಈಗಾಗಲೇ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡ ಶ್ರೀನಿಧಿ, ಈ ಸಿನಿಮಾ ಮೂಲಕ ಮತ್ತೊಮ್ಮೆ ಬೃಹತ್ ಪ್ಯಾನ್ ಇಂಡಿಯಾ ಲೆವೆಲ್‌ಗೆ ಎಂಟ್ರಿ ಕೊಡಲಿದ್ದಾರೆ.
ಇತ್ತ, ಅಜಿತ್ ಇತ್ತೀಚೆಗೆ ಬಹುತೇಕ ಕ್ಷೌರ ಮಾಡಿಕೊಂಡು ಸರಳ ಉಡುಪಿನಲ್ಲಿ ಬೆಲ್ಜಿಯಂನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿದ್ದು, “ಅಜಿತ್ ಚಿತ್ರರಂಗದಿಂದ ನಿವೃತ್ತಿ ಆಗ್ತಾರಾ?” ಎಂಬ ವದಂತಿಗೂ ಕಾರಣವಾಗಿದೆ.
ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಅಜಿತ್-ಶ್ರೀನಿಧಿ ಜೋಡಿ ಹೇಗಿರುತ್ತದೆ ಎಂಬುದು ಈಗ ಅಭಿಮಾನಿಗಳಲ್ಲಿ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.
Trending News
ಹೆಚ್ಚು ನೋಡಿ‘666 ಆಪರೇಷನ್ ಡ್ರೀಮ್ ಥಿಯೇಟರ್’ – ಬಿರುಸಿನ ಶೂಟಿಂಗ್, ಅದ್ಧೂರಿ ಸೆಟ್ನಲ್ಲಿ ಶಿವಣ್ಣ-ಧನಂಜಯ್ ಮ್ಯಾಜಿಕ್
