ತುಳು ಚಿತ್ರರಂಗಕ್ಕೆ ಕಾಲಿಟ್ಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್


ತುಳು ಚಿತ್ರರಂಗಕ್ಕೆ ಕಾಲಿಟ್ಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್, ಕನ್ನಡ ಚಿತ್ರರಂಗದಲ್ಲಿ ಕೆಲವು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ಬಳಿಕ, ಇದೀಗ ಮೊದಲ ಬಾರಿಗೆ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರು ಮೂಲದ ಶಿಲ್ಪಾ, ತುಳು ಭಾಷೆಯ ಸಿನಿಮಾಗೆ ಉತ್ತಮ ಮಾರುಕಟ್ಟೆ ಇರುವುದನ್ನು ಗಮನಿಸಿ, ಈ ಸಾಹಸ ಮಾಡುತ್ತಿದ್ದಾರೆ.
ಸಂದೀಪ್ ಬೆದ್ರ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾದ ಕಥೆ ಮತ್ತು ಚಿತ್ರಕತೆಯನ್ನು ಮೋಹನ್ ಭಟ್ಕಳ್ ಬರೆದಿದ್ದಾರೆ. ಕರಾವಳಿಯ ಮುಖಂಡ ಹರಿಕೃಷ್ಣ ಬಂಟ್ವಾಳ ಅವರ ಪುತ್ರ ನಿತ್ಯ ಪ್ರಕಾಶ್ ಬಂಟ್ವಾಳ ಹೀರೋ ಆಗಲಿದ್ದು, ಹೀರೋಯಿನ್ ಹೊಸ ಮುಖವಾಗಿರಲಿದೆ. ಚಿತ್ರೀಕರಣ ಡಿಸೆಂಬರ್‌ನಲ್ಲಿ ಪ್ರಾರಂಭವಾಗಲಿದ್ದು, ಗಣೇಶ್ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.