ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 21ಕ್ಕೆ ಮುಂದೂಡಿಕೆ


ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 21ಕ್ಕೆ ಮುಂದೂಡಿಕೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 21ಕ್ಕೆ ಮುಂದೂಡಿದೆ. ಈ ಮೊದಲು 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಅವರ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು, ಆದರೆ ಈಗ ಹೈಕೋರ್ಟ್‌ನಲ್ಲಿ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದೆ.
ಈ ಪ್ರಕರಣದ ಎರಡನೇ ಆರೋಪಿ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದರಿಂದ, ಅದೇ ಆಧಾರದ ಮೇಲೆ ಪವಿತ್ರಾ ಗೌಡ ಕೂಡ ಜಾಮೀನಿಗಾಗಿ ಕೋರಿದ್ದಾರೆ. ಪ್ರಸ್ತುತ ಪವಿತ್ರಾ ಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿದ್ದಾರೆ.