Back to Top

ನಿರ್ದೇಶಕ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು

SSTV Profile Logo SStv November 4, 2024
ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು
ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು
ನಿರ್ದೇಶಕ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು ‘ಮಠ’ ಹಾಗೂ ‘ಎದ್ದೇಳು ಮಂಜುನಾಥ’ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿಸಲಾಯಿತು. ಕುಟುಂಬಸ್ಥರ ಉಪಸ್ಥಿತಿಯಲ್ಲಿ ನಡೆದ ಈ ಅಂತಿಮ ವಿಧಿವಿಧಾನಕ್ಕೆ ಯೋಗರಾಜ್ ಭಟ್, ದುನಿಯಾ ವಿಜಯ್, ಡಾಲಿ ಧನಂಜಯ್, ನೀನಾಸಂ ಸತೀಶ್, ತಬಲಾ ನಾಣಿ ಸೇರಿದಂತೆ ಹಲವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. 1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್, 2006ರಲ್ಲಿ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು. ಅವರ ನಿರ್ದೇಶನದಲ್ಲಿ ಮೂಡಿಬಂದ ‘ಎದ್ದೇಳು ಮಂಜುನಾಥ’ ಚಿತ್ರಕ್ಕೆ ಫಿಲ್ಮ್‌ಫೇರ್ ಪ್ರಶಸ್ತಿ ಸಿಕ್ಕಿತ್ತು. ‘ಡೈರೆಕ್ಟರ್ ಸ್ಪೇಷಲ್’, ‘ಎರಡನೇ ಸಲ’ ಚಿತ್ರಗಳನ್ನು ಸಹ ನಿರ್ದೇಶಿಸಿದರು. ನಿರ್ದೇಶಕರಾಗಿ ಮಾತ್ರವಲ್ಲ, ನಟನಾಗಿ ಹಲವಾರು ಚಿತ್ರಗಳಲ್ಲಿ ಗುರುಪ್ರಸಾದ್ ಕಾಣಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಸೇರಿದಂತೆ ಅನೇಕ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದ ಅವರು, ತಮ್ಮ ಅನನ್ಯ ಶೈಲಿಯಿಂದ ಪ್ರೇಕ್ಷಕರಿಗೆ ನೆನಪಾಗಿದ್ದಾರೆ.