Back to Top

ಜೈಲಿನಲ್ಲಿ ದರ್ಶನ್‌ಗೆ ಬೆನ್ನು ನೋವು ಶಸ್ತ್ರಚಿಕಿತ್ಸೆ ಅವಶ್ಯಕತೆ

SSTV Profile Logo SStv October 3, 2024
ಬೆನ್ನು ನೋವು ಶಸ್ತ್ರಚಿಕಿತ್ಸೆ ಅವಶ್ಯಕತೆ
ಬೆನ್ನು ನೋವು ಶಸ್ತ್ರಚಿಕಿತ್ಸೆ ಅವಶ್ಯಕತೆ
ಜೈಲಿನಲ್ಲಿ ದರ್ಶನ್‌ಗೆ ಬೆನ್ನು ನೋವು ಶಸ್ತ್ರಚಿಕಿತ್ಸೆ ಅವಶ್ಯಕತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ನಟ ದರ್ಶನ್‌ಗೆ ಇದೀಗ ಬೆನ್ನು ನೋವಿನ ತೀವ್ರ ಸಮಸ್ಯೆ ಎದುರಾಗಿದೆ. ಬಳ್ಳಾರಿ ಜೈಲಿನ ವಾತಾವರಣ ದರ್ಶನ್‌ಗೆ ಹೊಂದುತ್ತಿಲ್ಲ ಎನ್ನಲಾಗಿದ್ದು, ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ದರ್ಶನ್‌ ಅವರು ಸದ್ಯಕ್ಕೆ ಬೆಂಗಳೂರಿಗೆ ಹೋಗಿ ಸ್ಕ್ಯಾನ್ ಮಾಡಿಸಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದು, ತಾತ್ಕಾಲಿಕವಾಗಿ ನೋವು ನಿವಾರಕ ಮಾತ್ರೆ ನೀಡಲು ವಿನಂತಿಸಿದ್ದಾರೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಯು ಅಕ್ಟೋಬರ್ 4ರಂದು ನಡೆಯಲಿದ್ದು, ಅಭಿಮಾನಿಗಳು ಕೋರ್ಟ್ ಆದೇಶದ ನಿರೀಕ್ಷೆಯಲ್ಲಿ ಇದ್ದಾರೆ.