ಕಿಚ್ಚ ಸುದೀಪ್ ಬಿಗ್ ಬಾಸ್ ಬೆನ್ನಲ್ಲೇ ಗುಡ್ ನ್ಯೂಸ್


ಕಿಚ್ಚ ಸುದೀಪ್ ಬಿಗ್ ಬಾಸ್ ಬೆನ್ನಲ್ಲೇ ಗುಡ್ ನ್ಯೂಸ್
ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ 11 ಅದ್ಧೂರಿಯಾಗಿ ಆರಂಭವಾಗಿದೆ. ಕಿಚ್ಚ ಸುದೀಪ್ ಅವರನ್ನು ಬಿಗ್ ಬಾಸ್ ವೇದಿಕೆಯಲ್ಲಿ ನೋಡಿ ಫ್ಯಾನ್ಸ್‌ಗಳು ತುಂಬಾ ಖುಷಿಪಟ್ಟಿದ್ದಾರೆ. ಅದಲ್ಲದೇ, ಕಿಚ್ಚ ಈ ಬಾರಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ.
ಇದರ ಬೆನ್ನಲ್ಲೇ ಇದೀಗ ಸುದೀಪ್ ಅವರ ಮತ್ತೊಂದು ಹೊಸ ಸುದ್ದಿಯು ಅಭಿಮಾನಿಗಳಿಗೆ ಸಂತಸ ತಂದಿದೆ. "ಮ್ಯಾಕ್ಸ್" ಸಿನಿಮಾವನ್ನು ಡಿಸೆಂಬರ್ 20ಕ್ಕೆ ರಿಲೀಸ್ ಮಾಡಲು ನಿರ್ಧಾರವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಕಿಚ್ಚನ ಜೊತೆ ವರಲಕ್ಷ್ಮೀ ಶರತ್‌ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ.
ಮ್ಯಾಕ್ಸ್ ನಂತರ ಬಹುನಿರೀಕ್ಷಿತ "ಬಿಲ್ಲ ರಂಗ ಭಾಷ" ಚಿತ್ರದ ಶೂಟಿಂಗ್ ಡಿಸೆಂಬರ್ ಎರಡನೇ ವಾರದಿಂದ ಶುರುವಾಗಲಿದೆ. ಬೆಂಗಳೂರಿನಲ್ಲಿ ಬೃಹತ್ ಸೆಟ್ ನಿರ್ಮಾಣವಾಗುತ್ತಿದ್ದು, ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ವರ್ಷವು ಕಿಚ್ಚ ಅಭಿಮಾನಿಗಳಿಗೆ ಸುದೀಪ್ ಅವರ ನಿರಂತರ ಹಿಟ್ ಸಿನಿಮಾಗಳ ಮೂಲಕ ಸಿಹಿ ನಗೆಯನ್ನೇ ತರುತ್ತಿದೆ!
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ – ಚಾಪ್ಟರ್ 1 ಟ್ರೇಲರ್ ನೋಡಲು ಅಭಿಮಾನಿಗಳ ಕಾತರ!
