ದರ್ಶನ್, ಪವಿತ್ರಾ ಗೌಡ ಜಾಮೀನು ಭವಿಷ್ಯ ಇಂದು ನಿರ್ಧಾರ – ಪವಿತ್ರಾ ಗೌಡ ದೇವರ ಮೊರೆಗೆ!


ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಭವಿಷ್ಯ ಇಂದು (ಜುಲೈ 24) ನಿರ್ಧಾರವಾಗಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹಿರಿಯ ವಕೀಲ ಸಿದ್ಧಾರ್ಥ್ ದವೆ ದರ್ಶನ್ ಪರ ವಾದ ಮಂಡನೆ ಆರಂಭಿಸಿದ್ದಾರೆ.
ಕೋರ್ಟ್ ತೀರ್ಪಿಗೆ ಮುನ್ನ, ಪವಿತ್ರಾ ಗೌಡ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿ ಮೂಲಕ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಫೋಟೋ ಹಂಚಿಕೊಂಡು, ದೇವರ ಮೇಲೆ ನಂಬಿಕೆ ಇಟ್ಟುಕೊಂಡಿರುವ ಸಂದೇಶವನ್ನ ನೀಡಿದ್ದಾರೆ. ಕೈ ಮುಗಿಯುವ ಎಮೋಜಿ ಬಳಸಿ, “ಎಲ್ಲವನ್ನೂ ದೇವರು ನೋಡಿಕೊಳ್ತಾನೆ” ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ.
ಇದೇ ಪ್ರಕರಣದಲ್ಲಿ, ಮಂಗಳವಾರ ನಡೆಯಬೇಕಿದ್ದ ವಿಚಾರಣೆಯನ್ನು ಗೈರಾದ ವಕೀಲ ಕಪಿಲ್ ಸಿಬಲ್ ಹಾಜರಾಗದ ಕಾರಣ ಮುಂದೂಡಲಾಗಿತ್ತು. ಸಿದ್ದಾರ್ಥ್ ದವೆ ಈ ಪ್ರಕರಣದ ಅಧ್ಯಯನಕ್ಕಾಗಿ ಸಮಯ ಕೇಳಿದ್ದರು. ಇದೀಗ ದ್ವಿ ಸದಸ್ಯ ಪೀಠದ ಮುಂದೆ ಇಂದು ಅಂತಿಮ ತೀರ್ಪು ಹೊರಬರುವ ನಿರೀಕ್ಷೆಯಿದೆ.
Related posts
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
