ರೇಣುಕಾಸ್ವಾಮಿ ಹತ್ಯೆ: ದರ್ಶನ್ ಜಾಮೀನು ಪ್ರಶ್ನಿಸಿದ ಸುಪ್ರೀಂ, ನ್ಯಾಯ ಸಿಗುತ್ತೆ ಎಂದ ರಮ್ಯಾ ಪೋಸ್ಟ್ ವೈರಲ್!


ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಜುಲೈ 24ರಂದು ನಡೆದ ವಿಚಾರಣೆಯಲ್ಲಿ, ಸುಪ್ರೀಂ ನ್ಯಾಯಮೂರ್ತಿಗಳು ಹೈಕೋರ್ಟ್‌ನ ನಿರ್ಧಾರದ ವಿರುದ್ಧ ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಬೆಳವಣಿಗೆಗಳ ಕುರಿತಂತೆ ನಟಿ ರಮ್ಯಾ (ದಿವ್ಯ ಸ್ಪಂದನ) ತಮ್ಮ ಇನ್‌ಸ್ಟಾಗ್ರಾಂ ಮತ್ತು ಎಕ್ಸ್ ಖಾತೆಗಳಲ್ಲಿ ಪ್ರತಿಕ್ರಿಯೆ ನೀಡಿದ್ದು, "ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎನ್ನುವ ಭರವಸೆ ಇದೆ" ಎಂದು ಬರೆದುಕೊಂಡಿದ್ದಾರೆ.
ಸದ್ಯ ದರ್ಶನ್ ವಿದೇಶದಲ್ಲಿ ‘ದಿ ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ತೀರ್ಪು 10 ದಿನಗಳಲ್ಲಿ ಹೊರಬರುವ ಸಾಧ್ಯತೆ ಇದ್ದು, ಜಾಮೀನು ರದ್ದುಪಡುವ ಸ್ಥಿತಿಯೂ ನಿರ್ಮಾಣವಾಗಿದೆ.
ಪವಿತ್ರಾ ಗೌಡಗೆ ಅಸಭ್ಯ ಸಂದೇಶ ಕಳಿಸಿದ್ದನ್ನು ಆಧಾರವಾಗಿಸಿ, ರೇಣುಕಾಸ್ವಾಮಿಯನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವತ್ರ ಚರ್ಚೆ ಮುಂದುವರೆದಿದೆ.
Related posts
Trending News
ಹೆಚ್ಚು ನೋಡಿ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
