Back to Top

ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಡಾಲಿ ನವೀನ್‌ ಶಂಕರ್

SSTV Profile Logo SStv October 14, 2024
ದುರ್ಗಾಪರಮೇಶ್ವರಿ ದರ್ಶನ ಪಡೆದ ಡಾಲಿ
ದುರ್ಗಾಪರಮೇಶ್ವರಿ ದರ್ಶನ ಪಡೆದ ಡಾಲಿ
ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಡಾಲಿ ನವೀನ್‌ ಶಂಕರ್ ಕನ್ನಡದ ನಟ ಡಾಲಿ ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಿನಿಮಾ ಕೆಲಸಕ್ಕೆ ಬ್ರೇಕ್‌ ಸಿಕ್ಕ ಬೆನ್ನಲ್ಲೇ ಸ್ನೇಹಿತರ ಜೊತೆ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಾಲಿ ಭೇಟಿ ನೀಡಿದ್ದಾರೆ. ‘ಸಲಾರ್’ ನಟ ನವೀನ್ ಶಂಕರ್ ಜೊತೆ ಡಾಲಿ ಧನಂಜಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ, ಡಾಲಿ ಮತ್ತು ನವೀನ್ ಶಂಕರ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಅಂದಹಾಗೆ, ಅಣ್ಣ ಇನ್ ಮೆಕ್ಸಿಕೋ, ಉತ್ತರಕಾಂಡ, ನಾಡಪ್ರಭು ಕೆಂಪೇಗೌಡ ಸೇರಿದಂತೆ ಡಾಲಿ ಕೈಯಲ್ಲಿ ಹಲವು ಸಿನಿಮಾಗಳಿವೆ. ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳಿಗೆ ಧನಂಜಯ ಅವಕಾಶ ನೀಡುತ್ತಿದ್ದಾರೆ. ಇನ್ನೂ ಶಿವಣ್ಣ ನಟನೆಯ ಹೊಸ ಸಿನಿಮಾದಲ್ಲಿ ನವೀನ್ ಶಂಕರ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.