Back to Top

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ

SSTV Profile Logo SStv September 18, 2024
ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ
ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು ಬಂಧಿಸಿದ್ದು, ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 3991 ಪುಟಗಳ ಆರೋಪ ಪಟ್ಟಿಯನ್ನು ಪೊಲೀಸರು ಕೋರ್ಟ್​ಗೆ ಸಲ್ಲಿಸಿದ್ದು, ಕೋರ್ಟ್‌ ಅದನ್ನು ಸ್ವೀಕರಿಸಿದೆ. ನಟ ದರ್ಶನ್ ಅವರು ಜೈಲಿನಲ್ಲಿ ಮೂರು ತಿಂಗಳ ಕಾಲ ಕಳೆಯುತ್ತಿದ್ದರೆ, ಸೆಪ್ಟೆಂಬರ್ 17ರಂದು ಅವರ ನ್ಯಾಯಾಂಗ ಬಂಧನ ಅವಧಿ ಮುಗಿಯುತ್ತಿತ್ತು. ಹೀಗಾಗಿ, ದರ್ಶನ್ ಮತ್ತು ಇತರ ಆರೋಪಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರು ಮಾಡಲಾಗಿದೆ. ದರ್ಶನ್ ಪರ ವಕೀಲರು ಜೈಲಿನಲ್ಲಿ ಕುರ್ಚಿ ವ್ಯವಸ್ಥೆ ನೀಡದ ಬಗ್ಗೆ ಮತ್ತೆ ಮನವಿ ಮಾಡಿದ್ದು, ಜಡ್ಜ್​ ಕೈದಿಗಳಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲು ಆದೇಶಿಸಿದರು.