Back to Top

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವ್ಯವಹಾರ ಮತ್ತೆ ಸಂಕಷ್ಟದಲ್ಲಿ ದರ್ಶನ್

SSTV Profile Logo SStv September 25, 2024
ಹಣದ ವ್ಯವಹಾರ ಮತ್ತೆ ಸಂಕಷ್ಟದಲ್ಲಿ ದರ್ಶನ್
ಹಣದ ವ್ಯವಹಾರ ಮತ್ತೆ ಸಂಕಷ್ಟದಲ್ಲಿ ದರ್ಶನ್
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವ್ಯವಹಾರ ಮತ್ತೆ ಸಂಕಷ್ಟದಲ್ಲಿ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಂಕಷ್ಟ ಎದುರಿಸುತ್ತಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಇದ್ದ ಅವರು, ಜಾಮೀನಿಗಾಗಿ ತೀವ್ರ ಪ್ರಯತ್ನಿಸುತ್ತಿದ್ದಾರೆ, ಆದರೆ ಈ ಗಂಭೀರ ಪ್ರಕರಣದ ಕಾರಣ ಜಾಮೀನು ಸಿಗಲು ಸುಲಭವಾಗುತ್ತಿಲ್ಲ. ಇದೀಗ ಹಣದ ವ್ಯವಹಾರ ವಿಚಾರದಿಂದ ಮತ್ತೊಂದು ಸಂಕಷ್ಟ ಎದುರಾಗಿದೆ. ಐಟಿ ಅಧಿಕಾರಿಗಳು ಸೆಪ್ಟೆಂಬರ್ 26 ಅಥವಾ 27ರಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿ, ದರ್ಶನ್ ವಿಚಾರಣೆ ನಡೆಸಲಿದ್ದಾರೆ. ದರ್ಶನ್ ಅವರು ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡಿದ್ದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ದರ್ಶನ್ ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಸೆಪ್ಟೆಂಬರ್ 27ರಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.