Back to Top

ಸಾರಿಗೆ ನೌಕರರ ಮುಷ್ಕರದ ಬಿಸಿ: ಹಿರಿಯ ನಟ ಹೊನ್ನವಳ್ಳಿ ಕೃಷ್ಣಿಗೂ ತೊಂದರೆ

SSTV Profile Logo SStv August 5, 2025
ಹಿರಿಯ ನಟ ಹೊನ್ನವಳ್ಳಿ ಕೃಷ್ಣಿಗೂ ತೊಂದರೆ
ಹಿರಿಯ ನಟ ಹೊನ್ನವಳ್ಳಿ ಕೃಷ್ಣಿಗೂ ತೊಂದರೆ

ಸಾರಿಗೆ ನೌಕರರ ಮುಷ್ಕರದ ಪರಿಣಾಮ ಜನ ಸಾಮಾನ್ಯರಿಗಷ್ಟೆ ಅಲ್ಲದೇ ಕನ್ನಡದ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಅವರಿಗೂ ತಟ್ಟಿದೆ. ವೈಟ್‌ಫೀಲ್ಡ್‌ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್‌ಗೆ ಬಂದಿದ್ದ ಹೊನ್ನವಳ್ಳಿ ಕೃಷ್ಣ ಮತ್ತು ಅವರ ಪತ್ನಿ, ಮಾದನಾಯಕನಹಳ್ಳಿಗೆ ಹೋಗಲು ಬಸ್‌ಗಾಗಿ ನಿರೀಕ್ಷಿಸುತ್ತಿದ್ದರು. ಆದರೆ ಬಸ್‌ಗಳು ರಸ್ತೆಗೆ ಇಳಿಯದ ಕಾರಣ ಅವರು ಕೊನೆಗೆ ಕ್ಯಾಬ್‌ ಮೂಲಕ ಹೋಗಬೇಕಾಯಿತು.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ಸಾರಿಗೆ ವಿಭಾಗಗಳ ನೌಕರರು ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರಕ್ಕೆ ಇಳಿದಿದ್ದಾರೆ. ಇದರ ಪರಿಣಾಮ ಸಾರ್ವಜನಿಕರು ನಿಲ್ದಾಣಗಳಲ್ಲಿ ಪರದಾಡುವ ಸ್ಥಿತಿಗೆ ತಲುಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನಟ ಕೃಷ್ಣ, “ಈ ತರಹದ ಬಂದ್ ಆಗಬಾರದಾಗಿತ್ತು. ಜನರಿಗೆ ತುಂಬಾ ತೊಂದರೆ ಆಗಿದೆ. ಇಂಥ ದುಸ್ಥಿತಿ ಮರುಕಳಿಸಬಾರದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.