ಜೇನ ಧ್ವನಿಯೋಳೆ ಮೀನ ಕಣ್ಣೋಳೆ.. ಗಣೇಶ್ ಜೊತೆ ಸೊಂಟ ಬಳುಕಿಸಿದ ಪ್ರಿಯಾಂಕಾ ಉಪೇಂದ್ರ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಚಿತ್ರವು ಸ್ಯಾಂಡಲ್‍ವುಡ್‍ನಲ್ಲಿ ಸೂಪರ್ ಹಿಟ್ ಆಗಿದ್ದು, ಅದರ ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸೌಂಡಿಂಗ್ ಮಾಡಿವೆ. ವಿಶೇಷವಾಗಿ “ದ್ವಾಪರ” ಹಾಡು 19 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡು ಜನಮನ ಗೆದ್ದಿದೆ.
ಇದೀಗ, ಈ ಹಾಡಿಗೆ ನಟಿ ಪ್ರಿಯಾಂಕಾ ಉಪೇಂದ್ರ ಮತ್ತು ನಟ ಗಣೇಶ್ ಒಟ್ಟಿಗೆ ಹೆಜ್ಜೆ ಹಾಕಿರುವ ವಿಡಿಯೋ ದೊಡ್ಡ ಸಂಚಲನವಾಗುತ್ತಿದೆ. ಪ್ರಿಯಾಂಕಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಡ್ಯಾನ್ಸ್ ವಿಡಿಯೋವನ್ನು ಶೇರ್ ಮಾಡಿದ್ದು, ಅಭಿಮಾನಿಗಳು “ಗೋಲ್ಡನ್ ಸ್ಟಾರ್ ಜೊತೆ ಗೋಲ್ಡನ್ ಕ್ವೀನ್” ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪ್ರಿಯಾಂಕಾ ಮತ್ತು ಗಣೇಶ್‌ರ ಡ್ಯಾನ್ಸ್ ಅಭಿಮಾನಿಗಳನ್ನು ಪುಳಕಗೊಳಿಸಿದೆ.