Back to Top

'ಬಿಗ್​ಬಾಸ್'ಗೆ ರಾಮನಗರ ಪೊಲೀಸರು ನೊಟೀಸ್ ಮಾನವ ಹಕ್ಕು ಉಲ್ಲಂಘನೆ ಆರೋಪ

SSTV Profile Logo SStv October 14, 2024
ಮಾನವ ಹಕ್ಕು ಉಲ್ಲಂಘನೆ ಆರೋಪ
ಮಾನವ ಹಕ್ಕು ಉಲ್ಲಂಘನೆ ಆರೋಪ
'ಬಿಗ್​ಬಾಸ್'ಗೆ ರಾಮನಗರ ಪೊಲೀಸರು ನೊಟೀಸ್ ಮಾನವ ಹಕ್ಕು ಉಲ್ಲಂಘನೆ ಆರೋಪ 'ಬಿಗ್​ಬಾಸ್ ಕನ್ನಡ' ಸೀಸನ್ 11 ಇದೀಗ ವಿವಾದದಲ್ಲಿ ಸಿಲುಕಿದೆ. ಮನೆಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ, ಮಾನವ ಹಕ್ಕು ಉಲ್ಲಂಘನೆ ಮತ್ತು ಮಹಿಳೆಯರ ಸಮ್ಮಾನಕ್ಕೆ ಧಕ್ಕೆ ತಂದ ಆರೋಪದ ಮೇರೆಗೆ, ಕುಂಬಳಗೋಡು ಠಾಣೆಯ ಪೊಲೀಸರು ಬಿಗ್​ಬಾಸ್ ಆಯೋಜಕರಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಿನಾಂಕದ ಫುಟೇಜ್ ಮತ್ತು ಸಂಪೂರ್ಣ ಆಡಿಯೋವನ್ನು ಠಾಣೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಶೋ ಆರಂಭವಾದಾಗ ಸ್ವರ್ಗ-ನರಕ ಕಾನ್ಸೆಪ್ಟ್‌ ಹೇರಲಾಗಿದ್ದು, ಇದರ ವಿರುದ್ಧ ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಾಗಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಯವರು ಶೋನಲ್ಲಿ ನಡೆಯುತ್ತಿರುವ ಮಾನವ ಹಕ್ಕು ಉಲ್ಲಂಘನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ನೋಟಿಸ್ ನೀಡಿದ್ದು, ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.