Back to Top

‘ಬಡವ ರಾಸ್ಕಲ್’ ನಿರ್ದೇಶಕ ಶಂಕರ್ ಗುರು ಈಗ ನಿರ್ಮಾಪಕ: ಹೊಸ ಚಿತ್ರ ‘ರಾವಣ ರಾಜ್ಯದಲ್ಲಿ ನವದಂಪತಿಗಳು’

SSTV Profile Logo SStv September 19, 2024
ಹೊಸ ಚಿತ್ರ ‘ರಾವಣ ರಾಜ್ಯದಲ್ಲಿ ನವದಂಪತಿಗಳು
ಹೊಸ ಚಿತ್ರ ‘ರಾವಣ ರಾಜ್ಯದಲ್ಲಿ ನವದಂಪತಿಗಳು
‘ಬಡವ ರಾಸ್ಕಲ್’ ನಿರ್ದೇಶಕ ಶಂಕರ್ ಗುರು ಈಗ ನಿರ್ಮಾಪಕ: ಹೊಸ ಚಿತ್ರ ‘ರಾವಣ ರಾಜ್ಯದಲ್ಲಿ ನವದಂಪತಿಗಳು’ ‘ಬಡವ ರಾಸ್ಕಲ್’ ಚಿತ್ರದ ಮೂಲಕ ಪ್ರಖ್ಯಾತಿಯಾಗಿರುವ ಶಂಕರ್ ಗುರು, ಈ ಬಾರಿ ನಿರ್ಮಾಣ ಕ್ಷೇತ್ರಕ್ಕೆ ಹೆಜ್ಜೆ ಹಾಕಿದ್ದಾರೆ. ‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಎಂಬ ಭಿನ್ನ ಶೀರ್ಷಿಕೆಯ ಸಿನಿಮಾ ನಿರ್ಮಿಸುತ್ತಿದ್ದು, ಅರ್ಜುನ್ ಸೂರ್ಯ ಮತ್ತು ನಿಧಿ ಹೆಗಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವು ಹೊಸದಾಗಿ ಮದುವೆಯಾದ ದಂಪತಿಗಳು ಸಮಾಜದ ಕಟ್ಟುಪಾಡುಗಳಿಗೆ ಸಿಲುಕುವ ಕಥಾವಸ್ತುವನ್ನು ಹೊಂದಿದ್ದು, ಡಾರ್ಕ್ ಸೋಶಿಯಲ್ ಡ್ರಾಮಾ ಆಗಿದೆ. ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಿಧಿ ಹೆಗಡೆ ಅವರು ‘ಶಾಖಾಹಾರಿ’ ಹಾಗೂ ‘ಡೊಳ್ಳು’ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದು, ಕನ್ನಡ ಚಿತ್ರರಂಗದಲ್ಲಿ ತಮ್ಮ ಸ್ಥಾನದನ್ನೇ ಮತ್ತಷ್ಟು ಬಲಪಡಿಸುತ್ತಿದ್ದಾರೆ.