ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ ರಚಿತಾ ರಾಮ್- ಫ್ಯಾನ್ಸ್ ಬೇಸರ
ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿಮಾನಿಗಳಿಗೆ ಕಹಿ ಸುದ್ದಿ ಕೊಟ್ಟಿದ್ದಾರೆ. ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಫ್ಯಾನ್ಸ್‌ಗೆ ರಚಿತಾ ರಾಮ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇದನ್ನೂ ಓದಿ:ದೊಡ್ಮನೆ ಧಗ ಧಗ- ಉಗ್ರಂ ಮಂಜು, ಚೈತ್ರಾ ನಡುವೆ ಕಿರಿಕ್ಎಲ್ಲರಿಗೂ ನಮಸ್ಕಾರ, ಎಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ಈ ಬಾರಿ ಚಿತ್ರೀಕರಣ ಇರುವುದರಿಂದ ನನ್ನ ಹುಟ್ಟುಹಬ್ಬ (ಅ.3) ಆಚರಣೆಯನ್ನು ಮಾಡಿಕೊಳ್ಳುತ್ತಿಲ್ಲ ಎಂದು ಹೇಳಲು ಇಚ್ಚಿಸುತ್ತೇನೆ. ಎಲ್ಲರಿಗೂ ಕ್ಷಮೆಯಾಚಿಸುತ್ತಾ ಎಂದಿನಂತೆ ಪ್ರತಿ ಭಾನುವಾರ ಚಿತ್ರೀಕರಣ ಮುಗಿಸಿ ಬಂದ ನಂತರ ಸಿಗುತ್ತೇನೆ ಎಂದು ನಟಿ ಮನವಿ ಮಾಡಿದ್ದಾರೆ.
ಅಂದಹಾಗೆ, ಶ್ರೀನಗರ ಕಿಟ್ಟಿ ಜೊತೆಗಿನ ‘ಸಂಜು ವೆಡ್ಸ್ ಗೀತಾ 2’ನಲ್ಲಿ ನಾಯಕಿಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಈ ಸಿನಿಮಾದ ಜೊತೆ ಹಲವು ಚಿತ್ರಗಳು ಅವರ ಕೈಯಲ್ಲಿವೆ.