Back to Top

ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ ತಾಯ್ತನದ ಖುಷಿಯಲ್ಲಿ ಹರಿಪ್ರಿಯಾ

SSTV Profile Logo SStv December 9, 2024
ತಾಯ್ತನದ ಖುಷಿಯಲ್ಲಿ ಹರಿಪ್ರಿಯಾ
ತಾಯ್ತನದ ಖುಷಿಯಲ್ಲಿ ಹರಿಪ್ರಿಯಾ
ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ ತಾಯ್ತನದ ಖುಷಿಯಲ್ಲಿ ಹರಿಪ್ರಿಯಾ ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿ ತಾಯ್ತನದ ಮಮತೆಯನ್ನು ಹಂಚಿಕೊಂಡಿದ್ದಾರೆ. "ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ" ಎಂದು ವಿಶೇಷ ಫೋಟೋವೊಂದನ್ನು ಶೇರ್ ಮಾಡಿದ ಅವರು, ತಾಯ್ತನದ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಂಪತಿ, 2022ರ ಜನವರಿ 26ರಂದು ವಿವಾಹವಾಗಿದ್ದು, ಇದೀಗ ತಮ್ಮ ಹೊಸ ಅತಿಥಿಯ ಆಗಮನಕ್ಕಾಗಿ ಸಜ್ಜಾಗಿದ್ದಾರೆ. ಪ್ರೀತಿ ಮತ್ತು ಕುಟುಂಬದ ಖುಷಿಯಲ್ಲಿ ತಾವಿಬ್ಬರೂ ಮುಳುಗಿದ್ದಾರೆ. ನವೆಂಬರ್ 1ರಂದು ವಸಿಷ್ಠ ಸಿಂಹ ಅವರು ಈ ಸಂತಸದ ಸುದ್ದಿಯನ್ನು ರಿವೀಲ್ ಮಾಡಿದ್ದು, ಅಭಿಮಾನಿಗಳು ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ.